ಕರಾವಳಿಕೊಡಗು

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ 8 ಮಂದಿಯಿದ್ದ ಕಾರು..!ಏನಿದು ಘಟನೆ?

221

ನ್ಯೂಸ್‌ ನಾಟೌಟ್‌ : ಚಾಲಕನೋರ್ವನ ನಿಯಂತ್ರಣ ತಪ್ಪಿ ಕಾರೊಂದು (Car) ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದ ಘಟನೆ ಬಗ್ಗೆ ವರದಿಯಾಗಿದೆ. ಕಾರಿನಲ್ಲಿದ್ದ 8 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.ಈ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ (Somavarapete) ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ.

ಹಾನಗಲ್ಲು ಗ್ರಾಮದ ನಿವಾಸಿ ಶಿವಣ್ಣ ಎಂಬವರು ತಮ್ಮ ತೋಟದಲ್ಲಿ ಕಾಫಿ (Coffee) ಕೊಯ್ದು, ಸಂಜೆ ಯಡೂರು ಮಾರ್ಗವಾಗಿ ಬರುವಾಗ ಸೋಮವಾರಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಯಡೂರು ಕೆರೆಗೆ ಬಿದ್ದಿದೆ. ಕಾರಿನೊಳಗಿದ್ದವರು ಕಿಟಕಿಗಳನ್ನು ಒಡೆದು ಹೊರಬರುವ ಮೂಲಕ ಜೀವ ಉಳಿಸಿಕೊಂಡಿದ್ದಾರೆ.ಮದಲಾಪುರದ ಜ್ಯೋತಿ, ಲಕ್ಷ್ಮಿ, ಮನು, ಸೀತಮ್ಮ, ರತಿ ಅವರುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸೋಮವಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. 

ಕೆರೆಯು ರಸ್ತೆಯ ಅಂಚಿನಲ್ಲಿದ್ದು, ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವುದರಿಂದ ಯಾವುದೇ ಸಂಭವಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕೆರೆಯ ಸುತ್ತ ಭದ್ರತಾ ಬೇಲಿ ಅಳವಡಿಸಬೇಕೆಂದು ಯಡೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.

See also  ಉಳ್ಳಾಲ:ಮನೆ ಮೇಲೆ ತಡೆಗೋಡೆ ಬಿದ್ದು 10ವರ್ಷದ ಬಾಲಕಿ ಸಾವು..! ಫಲಿಸದ ಚಿಕಿತ್ಸೆ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget