Latestಕರಾವಳಿರಾಜಕೀಯ

9 ಇಂದಿರಾ ಕ್ಯಾಂಟೀನ್‌ ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ, ಶೀಘ್ರದಲ್ಲೇ ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತೇವೆ ಎಂದ ಸಿದ್ದರಾಮಯ್ಯ

915

ನ್ಯೂಸ್ ನಾಟೌಟ್: ಮೈಸೂರಿನ ಹಿನಕಲ್‌ ನಲ್ಲಿಂದು ಮೇ.25) ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್‌ ಗಳನ್ನು ಮುಖ್ಯಮಂತ್ರಿ ಸಿದ್ದರಾಮ್ಯಯ ಲೋಕಾರ್ಪಣೆಗೊಳಿಸಿದರು. ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಿನಕಲ್‌ ನಲ್ಲಿ ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ ದೇವೇಗೌಡ ಸೇರಿ ಇಂದಿರಾ ಕ್ಯಾಂಟೀನ್‌ ಲೋಕಾರ್ಪಣೆಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಮಾತನಾಡಿ, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ. 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದೆವು.

ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ. ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು. ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶಿರಾಡಿ ಘಾಟ್ ನಲ್ಲಿ ಮಂಗಳೂರು- ಬೆಂಗಳೂರು ರಸ್ತೆ ಕುಸಿತ..! ವಾಹನ‌ ಸವಾರರಲ್ಲಿ ಆತಂಕ..!

ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ..! ಪ್ರಯಾಣಿಕರನ್ನು ಉಳಿಸಿದ ನಿರ್ವಾಹಕನ ಸಾಹಸಕ್ಕೆ ಮೆಚ್ಚುಗೆ, ವಿಡಿಯೋ ವೈರಲ್

See also  ಕಲ್ಲುಗುಂಡಿ: ಸೇತುವೆ ಅಡಿಯಲ್ಲಿ ಅಕ್ರಮ ಮರಳುಗಾರಿಕೆ, ಸಾರ್ವಜನಿಕರಿಂದ ದೂರು, ಬೆಂಡೆತ್ತಿ ಬ್ರೇಕ್ ಹಾಕಿದ ಅರಣ್ಯ ಇಲಾಖೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget