ನ್ಯೂಸ್ ನಾಟೌಟ್ : ಒಕ್ಕಲಿಗ ಗೌಡ ಸೇವಾ ಸಂಘ ಕಡಬ ಮತ್ತು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಮತ್ತು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇವರ ಸಹಯೋಗದಲ್ಲಿ ಕೆವಿಜಿ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಕೆ ವಿ ಚಿದಾನಂದ ಇವರ 70ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಕಡಬ ಗೌಡ ಸಮುದಾಯ ಭವನದಲ್ಲಿ ಅ.26 ರಂದು ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಯಿತು. ಕಡಬ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಸುರೇಶ ಬೈಲು ಅಧ್ಯಕ್ಷತೆ ವಹಿಸಿದ್ದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಶಿಬಿರವನ್ನು ಉದ್ಘಾಟಿಸಿದರು. ಒಕ್ಕಲಿಗ ಸೇವಾ ಸಂಘದ ವ್ಯವಸ್ಥಾಪಕ ಅಶೋಕ್ ಕಡಬ ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು. ಸಭೆಯಲ್ಲಿ ಆಶಾ ತಿಮ್ಮಪ್ಪ, ಬಾಲಕೃಷ್ಣ ಕೋಲ್ಪೆ ಮತ್ತು ಗೋಪಾಲ ಕೃಷ್ಣ ಕೊಯಿಲ, ಕೇಶವ ಗೌಡ ಅಮೈ, ಶಿವಕುಮಾರ್ ಸುಬ್ರಹ್ಮಣ್ಯ ಹಾಗೂ ಪೂರ್ಣೇಶ್ ಗೌಡ ಬಲ್ಯ ಉಪಸ್ಥಿತರಿದ್ದರು. ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಮತ್ತು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಯ ಹಲವು ಖ್ಯಾತ ವೈದ್ಯರಿಂದ ಜನರ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು.













