ನ್ಯೂಸ್ ನಾಟೌಟ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿ ಮೂರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದವರು ಮೂಡುಬಿದಿರೆಯಿಂದ ಹೊರಟು ಬೆಂಗಳೂರಿನತ್ತ ತೆರಳುತ್ತಿದ್ದರು ಎನ್ನಲಾಗಿದೆ. ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಸಂಪೂರ್ಣ ಹಾನಿಯಾದರೂ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.













