ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಅಡ್ಕಾರಿನಲ್ಲಿ ಅಪರಿಚಿತ ಯುವಕನ ಶವವೊಂದು ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.
ಈತ ಯಾರು ಎಲ್ಲಿಯವನು ಎನ್ನುವುದರ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಶರ್ಟ್ ಹಾಗೂ ಪ್ಯಾಂಟ್ ಧರಿಸಿದ ಸ್ಥಿತಿಯಲ್ಲಿರುವ ಮೃತದೇಹವು ಪಯಸ್ವಿನಿ ನದಿಯ ಹಳೆ ಸೇತುವೆಯ ಕಂಬವೊಂದರ ಬಳಿ ಮರದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದು ನದಿಯ ಸಮೀಪದಲ್ಲಿ ನೂರಾರು ಸಂಖ್ಯೆಯಲ್ಲಿ ಜನ ನೆರೆದಿದ್ದಾರೆ ಎಂದು ತಿಳಿದು ಬಂದಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಅನ್ನುವುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ.