ನ್ಯೂಸ್ ನಾಟೌಟ್ : ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಮಹಿಳೆಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ. ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ತಿಳಿಸಿದ್ದರು. ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್ , ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.













