ನ್ಯೂಸ್ ನಾಟೌಟ್: ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಸಂಪಾಜೆ ಗ್ರಾಮ ಪಂಚಾಯತ್ ಸೇರಿದಂತೆ ೧೭೬ ಗ್ರಾಮಗಳಿಗೆ ಪ್ರಶಸ್ತಿಯ ನಗದು ಮೊತ್ತವನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿದೆ.
ಕಳೆದ ವರ್ಷ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಆದರೆ ಇದುವರೆಗೆ ಪ್ರಶಸ್ತಿ ನೀಡುವ ಕಾರ್ಯಕ್ರಮ ನಡೆದಿಲ್ಲ .ಜತೆಗೆ ನಗದು ಮೊತ್ತವನ್ನೂ ಹಂಚಿರಲಿಲ್ಲ. ಸುಳ್ಯ ತಾಲೂಕಿನ ಸಂಪಾಜೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಗ್ರಾಮಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದವು. ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತ್ ಗಳನ್ನು ಪ್ರೋತ್ಸಾಹಿಸಲು ೨೦೧೩-೧೪ನೇ ಸಾಲಿನಿಂದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿ ರೂ. ೫ ಲಕ್ಷ ನಗದು ಬಹುಮಾನವನ್ನು ನೀಡಿ ಗೌರವಿಸಲಾಗುತ್ತಿದೆ.