37.3 C
Sullia
Sunday, March 8, 2026

ಪ್ರೀತಿಸಿದ ಹುಡ್ಗಿಯ ಲಗ್ನ ಪತ್ರಿಕೆ ನೋಡಿ ಯುವಕ ಆತ್ಮಹತ್ಯೆಗೆ ಶರಣು, ಏನಿದು ಘಟನೆ?

ನ್ಯೂಸ್ ನಾಟೌಟ್ :ಪ್ರೀತಿಸಿದ ಯುವತಿಯ (Lover) ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಬಿಟ್ಟಂಗಾಲ ಪೆಗ್ಗರಿಕಾಡ್ ಗ್ರಾಮದಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬಿಟ್ಟಂಗಾಲ ಗ್ರಾಪಂ ವ್ಯಾಪ್ತಿಯ ಪೆಗ್ಗರಿಕಾಡ್ ಪೈಸಾರಿ ನಿವಾಸಿ ಹಾಗೂ ಜಿಪಂ ಮಾಜಿ ಸದಸ್ಯ ದಿವಂಗತ ಹೆಚ್.ಎಂ ಕಾಳಯ್ಯ ಅವರ ಪುತ್ರ ಹೆಚ್.ಕೆ. ಸುಮಂತ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.


ದಿವಂಗತ ಕಾಳಯ್ಯ ದಂಪತಿಗೆ ಇಬ್ಬರು ಹೆಣ್ಣು ಹಾಗೂ ಓರ್ವ ಗಂಡುಮಗ. ಹೆಣ್ಣು ಮಕ್ಕಳಿಗೆ ಮದುವೆಯಾಗಿದೆ. ಮೃತ ಸುಮಂತ್‌ಗೆ ಕೆಲ ವರ್ಷಗಳ ಹಿಂದೆ ಯುವತಿಯೊಬ್ಬಳ ಪರಿಚಯವಾಗಿದೆ. ಆದ್ರೆ ಸುಮಂತ್‌ ಆಕೆಯನ್ನ ಒನ್‌ಸೈಡ್‌ ಲವ್‌ ಮಾಡ್ತಿದ್ದ. ಈ ಬಗ್ಗೆ ಯುವತಿ ಫೋರ್ಸ್‌ ಮಾಡ್ತಿದ್ದಾನೆ ಅಂತ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಆ ನಂತರ ಯುವಕ ಪ್ರೇಮ ವೈಫಲ್ಯದಿಂದ ಬೇರ್ಪಟ್ಟು ಹೊಸ ಜೀವನ ಶುರು ಮಾಡಿದ್ದ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಈತಣ 6 ತಿಂಗಳ ಹಿಂದೆ ಕೆಲಸ ಬಿಟ್ಟು ಮನೆಗೆ ಬಂದಿದ್ದ. ನಂತರ ಇಲ್ಲಿಯೇ ಖಾಸಗಿ ವಾಹನ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ.

ಮೃತ ಸುಮಂತ್‌ಗೆ ತನ್ನ ಪ್ರೇಯಸಿ ಮದುವೆ ನಿಗದಿಯಾದ ದಿನಾಂಕ ಗೊತ್ತಾಗಿದೆ. ಇದರಿಂದ ಮನನೊಂದ ಯುವಕ ಅ.18ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ. ತಕ್ಷಣವೇ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಗೆ ರವಾನಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಗೃಹದಲ್ಲಿ ಸುಮಂತ್‌ ಮೃತಪಟ್ಟಿದ್ದಾನೆ. 

Related Articles

LEAVE A REPLY

Please enter your comment!
Please enter your name here

Latest Articles