ನ್ಯೂಸ್ ನಾಟೌಟ್ : ಬಿಸ್ಲೆ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನ ಪಲ್ಟಿಯಾಗಿದ್ದು, ವ್ಯಾನ್ನಲ್ಲಿದ್ದವರಿಗೆ ಗಂಭೀರ ಗಾಯಗಳಾದ ಘಟನೆ ಬಗ್ಗೆ ವರದಿಯಾಗಿದೆ.

ಏನಿದು ಘಟನೆ?
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆ ಕಾರ್ಯಕ್ರಮವಿತ್ತು. ಕೂಡುರಸ್ತೆ ವನಗೂರು ಯುವಕ ಹಾಗೂ ಏನೆಕಲ್ಲಿನ ಯವತಿ ಜತೆ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು.

ಈ ಮದುವೆಗಾಗಿ ವರನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಹೀಗೆ ಬರುತ್ತಿರುವಾಗ ವ್ಯಾನ್’ನಲ್ಲಿದ್ದ ಹಲವರಿಗೆ ಗಂಭೀರ ಗಾಯವಾಗಿದೆ, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆ ನ್ಸ್’ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.














