ನ್ಯೂಸ್ ನಾಟೌಟ್ : ದ.ಕ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಯವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜೇಂದ್ರ ಕೆವಿ ಅವರನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೇರಿದಂತೆ 21 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ದ.ಕ ಜಿಲ್ಲೆಯ ನೂತನ ಡಿಸಿ ಆಗಿ ಜಿ.ಪಂ ಸಿಇ ಆಗಿದ್ದ ಕುಮಾರ್ ಅವರನ್ನು ನೇಮಿಸಲಾಗಿದೆ.