ನ್ಯೂಸ್ ನಾಟೌಟ್ : ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ದಮನಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರ ಧಾಳಿಗಳಾಗುತ್ತಿದೆ. ಇದಕ್ಕೆ ಸರಕಾರ ಕೂಡ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದರ ವಿರುದ್ದವಾಗಿ ಅ.29 ರಂದು ಸುಳ್ಯ ತಾಲೂಕು ಕಚೇರಿ ಎದುರು ಎಲ್ಲಾ ಸಮಾನ ಮನಸ್ಕ ಸಂಘಟನೆಗಳು ಹಾಗೂ ಜಾತ್ಯತೀತ ನಾಯಕರನ್ನು ಸೇರಿಸಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ಮುಸ್ಲಿಂ ಯೂತ್ ಕೌನ್ಸಿಲ್ನ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ.
ಸುಳ್ಯದಲ್ಲಿ ತುರ್ತು ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ರಾಜ್ಯದಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣಗಳು ಹೆಚ್ಚಾಗುತ್ತಿದೆ. ಕಡಬದ ಕಾಣಿಯೂರಿನಲ್ಲಿ ಬಟ್ಟೆ ವ್ಯಾಪಾರಿಗಳ ಮೇಲೆ ನಡೆದ ಘಟನೆ ಖಂಡನೀಯ. ಅವರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಲು ಪೊಲೀಸ್ ಇಲಾಖೆ ಇದೆ. ತಾಲಿಬಾನ್ ಸಂಸ್ಕೃತಿಯ ರೀತಿ ನೈತಿಕ ಪೊಲೀಸ್ಗಿರಿ ಮಾಡುವುದು ಸರಿಯಲ್ಲ. ಎಂದ ಅವರು ಎರಡು ಧರ್ಮಗಳಲ್ಲಿ ಕೆಲವು ಕಿಡಿಗೇಡಿಗಳಿದ್ದಾರೆ. ಸಮಾಜದ ಸ್ವಾಸ್ತö್ಯ ಕೆಡವುತ್ತಿದ್ದಾರೆ. ಇದರಿಂದ ಈ ಸಮಾಜದ ಹೆಸರು ಕೆಡುತ್ತಿದೆ. ಸರಕಾರ ಕೂಡ ಮುಸ್ಲಿಂ ಸಮುದಾಯವನ್ನು ಕಡೆಗಣಿಸುತ್ತಿದೆ. ರಾಜ್ಯದಲ್ಲಿ ಹತ್ಯೆಯಾದ ಅಲ್ಪಸಂಖ್ಯಾತ ಸಮುದಾಯದವರಿಗೆ ಪರಿಹಾರ ನೀಡಿಲ್ಲ. ಮಾನವ ಧರ್ಮ ಕಾಪಾಡಲು ಸರಕಾರ ವಿಫಲವಾಗಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಗಡಿ ಭಾಗಗಳ ಸಹಿತ ಮೂಲೆ ಮೂಲೆಗಳಲ್ಲಿ ಪೊಲೀಸ್ ಇಲಾಖೆ ಸಿಸಿಟಿವಿಗಳನ್ನು ಅಳವಡಿಸಬೇಕು. ಇದಕ್ಕೆ ಇಲಾಖೆ ಕೂಡಲೇ ಕಾರ್ಯಪ್ರವೃತ್ತವಾಗಬೇಕು.ರಾಜ್ಯ ಅಲ್ಪ ಸಂಖ್ಯಾತರ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಸಂಪಾಜೆ ಗ್ರಾ.ಪಂ. ಸದಸ್ಯ ಅಬ್ಬುಶಾಲಿ ಗೂನಡ್ಕ , ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕ್ಕೊ, ಅಲ್ಪಸಂಖ್ಯಾತ ಘಟಕದ ಉಪಾದ್ಯಕ್ಷ ಹನೀಫ್ ಬೀಜಕೊಚ್ಚಿ ಉಪಸ್ಥಿತರಿದ್ದರು.