27.7 C
Sullia
Sunday, March 8, 2026

ಸುಳ್ಯ: ನಾಳೆಯಿಂದ ಕನ್ನಡ ರಾಜ್ಯೋತ್ಸವ 2025 – ಸಾಹಿತ್ಯ ಸಂಭ್ರಮ

ನ್ಯೂಸ್ ನಾಟೌಟ್ : ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ -೨೦೨೫ ಕಾರ್ಯಕ್ರಮವು ನ.1ರಿಂದ ನ. 7ರ ವರೆಗೆ ವಿವಿಧ ಕಡೆಗಳಲ್ಲಿ ನಡೆಯಲಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ನ.1ರಂದು ಅಪರಾಹ್ನ 2ಗಂಟೆಗೆ ಸಾಹಿತ್ಯ ಸಂಭ್ರಮ -2025ರ ಉದ್ಘಾಟನಾ ಸಮಾರಂಭ ಹಾಗೂ ಕನ್ನಡ ಗಾನ ಕಲರವ ಕಾರ್ಯಕ್ರಮವು ರಂಗಮಯೂರಿ ಕಲಾಶಾಲೆ (ರಿ.) ಸುಳ್ಯ ಇವರ ಸಹಕಾರದೊಂದಿಗೆ ರಂಗಮಯೂರಿ ಕಲಾಶಾಲೆ ಸುಳ್ಯದಲ್ಲಿ ನಡೆಯಲಿದೆ. ಡಾ| ಯು. ಪಿ. ಶಿವಾನಂದ ಉದ್ಘಾಟಿಸಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಭಾಗವಹಿಸಲಿದ್ದಾರೆ. ಕನ್ನಡ ಗಾನ ಕಲರವ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಹೆಸರಾಂತ ಗಾಯಕರು ಮತ್ತು ನೆಹರೂ ಮೆಮೋರಿಯಲ್ ಕಾಲೇಜ್ ಸುಳ್ಯ ಇಲ್ಲಿಯ ತುಳಸಿ ಮತ್ತು ತಂಡ ಹಾಗೂ ಸುಳ್ಯದ ರಂಗಮಯೂರಿ ಕಲಾ ಶಾಲಾ ವಿದ್ಯಾರ್ಥಿಗಳು ನಡೆಸಿಕೊಡಲಿದ್ದಾರೆ.

ನ.2ರಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಸುಳ್ಯ ಹೋಬಳಿ ಘಟಕ ಹಾಗೂ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಹಕಾರದೊಂದಿಗೆ ದಿ| ಯು. ಸುಬ್ರಾಯ ಗೌಡ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನವು ಸರಕಾರಿ ಪದವಿಪೂರ್ವ ಕಾಲೇಜ್ ಸುಳ್ಯ ಇಲ್ಲಿ ವಿದ್ಯಾರ್ಥಿನಿ ಪೌರ್ಣಮಿ-ಸರಕಾರಿ ಪದವಿಪೂರ್ವ ಕಾಲೇಜ್ ಸುಳ್ಯ ಇವರ ಸಮ್ಮೇಳಾನಧ್ಯಕ್ಷತೆಯಲ್ಲಿ ನಡೆಯಲಿದೆ. ರಾಷ್ಟ್ರ ಧ್ವಜಾರೋಹಣವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ. ಬಿ. ಸುಧಾಕರ ರೈ, ಕನ್ನಡ ಧ್ವಜಾರೋಹಣವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ ನೆರವೇರಿಸಲಿದ್ದಾರೆ. ಸಮ್ಮೇಳನದ ದೀಪ ಪ್ರಜ್ವಲನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ. ವಿ. ಚಿದಾನಂದ ನೆರವೇರಿಸಲ್ಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ವಿದ್ಯಾರ್ಥಿನಿ ಕು. ಆತ್ಮೀಯ ಕೆ. ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪೂರ್ವಾಹ್ನ 11.30ರಿಂದ ಸುಳ್ಯ ತಾಲೂಕಿನ ವಿವಿಧ ಶಾಲಾ ಕಾಲೇಜು ವಿದಾರ್ಥಿಗಳಿಂದ ವಿದ್ಯಾರ್ಥಿ ಕವಿಗೋಷ್ಠಿ ನಡೆಯಲಿದೆ. ಅಪರಾಹ್ನ 1.30ರಿಂದ “ಡಿಜಿಟಲ್ ಯುಗದಲ್ಲಿ ಕನ್ನಡ ಭಾಷಾ ಬೆಳವಣಿಗೆ – ಒಂದು ಸವಾಲು” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿ ಚರ್ಚಾ ಗೋಷ್ಠಿ ನಡೆಯಲ್ಲಿದ್ದು, ಪ್ರಕಾಶ್ ಮೂಡಿತ್ತಾಯ ಸಮಾನ್ವಯಕಾರರಾಗಿ ಭಾಗವಹಿಸಲಿದ್ದಾರೆ. ಅಪರಾಹ್ನ 2.45ರಿಂದ ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭವು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್ ಇವರ ಸಭಾದ್ಯಕ್ಷತೆಯಲ್ಲಿ ನಡೆಯಲ್ಲಿದ್ದು, ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ವಿದಾರ್ಥಿನಿ ಕು. ಶ್ರೇಯಾ ಎಂ. ಸಮಾರೋಪ ಭಾಷಣ ಮಾಡಲಿದ್ದಾರೆ.

ನ.3ರಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇದರ ಸಹಕಾರದೊಂದಿಗೆ ಕನ್ನಡಗಾನ ಯಾನ ಕಾವ್ಯಮಿಲನ ಹಾಗೂ ಸ್ಪರ್ಧಾ ಕಾರ್ಯಕ್ರಮ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಂಡೆಕೋಲು ಇಲ್ಲಿ ಪೂರ್ವಾಹ್ನ 9.30ಕ್ಕೆ ನಡೆಯಲಿದೆ. ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮುರಳೀಧರ ರೈ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ರಾಷ್ಟ್ರ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಮಂಡೆಕೋಲು ಇದರ ಅಧ್ಯಕ್ಷ ಕುಶಲ ಉದ್ದಂತಡ್ಕ ಹಾಗೂ ಕನ್ನಡ ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುರೇಶ್ ಕಣೆಮರಡ್ಕ ನೆರವೇರಿಸಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷ ಚಂದರಶೇಖರ ಪೇರಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲ್ಲಿದ್ದು, ಖ್ಯಾತ ವೈದ್ಯರಾದ ಡಾ| ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ ದೀಪ ಪ್ರಜ್ವಲನೆ ಗೈಯಲ್ಲಿದ್ದಾರೆ. ಸಾಹಿತಿಗಳಾದ ಚಂದ್ರಶೇಖರ ಮಂಡೆಕೋಲು ರಾಜ್ಯೋತ್ಸವ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ. ಸದಾನಂದ ಮಾವಜಿ ಭಾಗವಹಿಸಲಿದ್ದಾರೆ.

ನ.4ರಂದು ನೆಹರು ಮೆಮೋರಿಯಲ್ ಕಾಲೇಜ್, ಸುಳ್ಯ ಇದರ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ಸಹಕಾರದೊಂದಿಗೆ ನೆಹರು ಮೆಮೋರಿಯಲ್ ಕಾಲೇಜ್, ಸುಳ್ಯದಲ್ಲಿ ಕನ್ನಡ ನುಡಿ ಸಂಭ್ರಮ – ಸ್ಪರ್ಧಾ ಕಾರ್ಯಕ್ರಮ ಪೂರ್ವಾಹ್ನ 9.30ಕ್ಕೆ ನಡೆಯಲಿದೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲ್ಲಿದ್ದು, ಹಿರಿಯ ಸಾಹಿತಿಗಳಾದ ಲೀಲಾ ದಾಮೋದರ ದೀಪ ಪ್ರಜ್ವಲನೆಗೈಯಲಿದ್ದಾರೆ.

ನ.5ರಂದು ಪ್ರೆಸ್ ಕ್ಲಬ್ ಸುಳ್ಯ ಇದರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಉಪನ್ಯಾಸ – ಪತ್ರಕರ್ತ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿ ಕಾರ್ಯಕ್ರಮ ಸುಳ್ಯದ ಅಂಬಟಡ್ಕದಲ್ಲಿರುವ ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ಕುತ್ಯಾಳ ನಾಗಪ್ಪ ಗೌಡ (ಕಿರಣ) ಉದ್ಘಾಟಿಸಲ್ಲಿದ್ದು, ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಜಾನಪದ ಸಂಶೋಧಕರಾದ ಸುಂದರ ಕೇನಾಜೆಯವರು “ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಕರ್ತರ ಪಾತ್ರ” ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಜಯಮ್ಮ ಬಿ ಚೆಟ್ಟಿಮಾಡ ಹಾಗೂ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ| ಲೀಲಾಧರ್ ಡಿ. ವಿ. ಯವರು ಭಾಗವಹಿಸಲಿದ್ದಾರೆ. ಪ್ರೆಸ್‌ಕ್ಲಬ್ ಸುಳ್ಯ ಇದರ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಪತ್ರ ಕರ್ತ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿ ಕಾರ್ಯಕ್ರಮ ಕೂಡಾ ನಡೆಯಲಿದೆ.

ನ.6 ಗುರುವಾರ ಬೆಳಗ್ಗೆ 10 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರಧಾನ ಮಂತ್ರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇವರ ಸಹಕಾರದೊಂದಿಗೆ ಪಂಜ ಹೋಬಳಿ ಮಟ್ಟದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ ಕಲರವ ಹಾಗೂ ವಿದಾರ್ಥಿಗಳಿಗೆ ಸ್ಥಳದಲ್ಲಿಯೇ ಕವನ ರಚನೆ, ಕನ್ನಡ ಭಾಷಣ,
ಕನ್ನಡ ಗೀತ ಗಾಯನ ಸ್ಪರ್ಧೆಗಳು ಪ್ರಧಾನ ಮಂತ್ರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ಗುತ್ತಿಗಾರು ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಉದ್ಘಾಟಿಸಲ್ಲಿದ್ದು, ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಕಾರ್ಯಕ್ರಮದ ಅದ್ಯಕ್ಷತೆ ವಹಿಸಲಿದ್ದಾರೆ.

ನ.7ರಂದು ಸಾಯಂಕಾಲ 5.30ಕ್ಕೆ ಮಿತ್ರ ಯುವಕ ಮಂಡಲ (ರಿ.) ಕೊಯಿಕುಳಿ ಹಾಗೂ ಕುರಲ್ ತುಳುಕೂಟ ದುಗಲಡ್ಕ ಇವರ ಸಹಕಾರದೊಂದಿಗೆ ಸಾಹಿತ್ಯ ಸಂಭ್ರಮದ ಸಮಾರೋಪ ಸಮಾರಂಭ, ಸನ್ಮಾನ ಗಾನ ವೈಭವ ಕಾರ್ಯಕ್ರಮ ಅಯ್ಯಪ್ಪ ಭಜನಾ ಮಂದಿರ ದುಗಲಡ್ಕ ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ತ್ನ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಅಧ್ಯಕ್ಷತೆಯಲ್ಲಿ ನಡೆಯಲ್ಲಿದ್ದು, ನಗರ ಯೋಜನಾ ಪ್ರಾಧಿಕಾರ ಸುಳ್ಯ ಇದರ ಅಧ್ಯಕ್ಷ ಕೆ. ಎಂ. ಮುಸ್ತಫಾ ಸಮಾರೋಪ ಮಾತುಗಳನ್ನಾಡಲಿದ್ದಾರೆ.
ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಪೂರ್ವಾಧ್ಯಕ್ಷ ಪಿ. ಸಿ. ಜಯರಾಮ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷ ಸದಾನಂದ ಮಾವಜಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉದಯಕುಮಾರಿ ಬಿರ್ಮಕಜೆ ಇವರಿಗೆ ಕಾದಂಬರಿ ಕ್ಷೇತ್ರದಲ್ಲಿ, ಡಾ. ಚಂದ್ರಶೇಖರ ದಾಮ್ಲೆ ಇವರಿಗೆ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಹಾಗೂ ಚಂದ್ರಶೇಖರ ಮೋಂಟಡ್ಕ ಇವರಿಗೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಕನ್ನಡ ರಾಜ್ಯೋತ್ಸವ ಸನ್ಮಾನವನ್ನು ಪ್ರಧಾನ ಮಾಡಲಿದ್ದೇವೆ. ಸಭಾ ಕಾರ್ಯಕ್ರಮದ ಬಳಿಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ ಯಕ್ಷಗಾನ ವೈಭವ ಕಾರ್ಯಕ್ರಮ ನಡೆಯಲಿದೆ. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಸಾಹಿತ್ಯ ಸಂಭ್ರಮ -2025ರ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ತಾವೆಲ್ಲರೂ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಮತ್ತು ಪರಿಷತ್ ನ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles