ನ್ಯೂಸ್ ನಾಟೌಟ್ : ನೆಲ್ಯಾಡಿಯ ಬಾರ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಸೌಖ್ಯದಿಂದ ಗುರುವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನೆಲ್ಯಾಡಿಯ ಬಾರ್ನಲ್ಲಿ ಕೆಲಸಕ್ಕಿದ್ದ ಇವರಿಗೆ ಉಸಿರಾಟದ ತೊಂದರೆ ಇತ್ತು. ಅ.27ರಂದು ಬೆಳಗ್ಗೆ ತೀವ್ರ ಅಸೌಖ್ಯಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಅವರನ್ನು ಉಳಿಸಿಕೊಳ್ಳುವುದಕ್ಕೆ ಪ್ರಯತ್ನ ನಡೆಸಿದರೂ ಸಾಧ್ಯವಾಗಲಿಲ್ಲ. ಸುಮಾರು 12 ವರ್ಷಗಳ ಹಿಂದೆ ಮನೆಯಿಂದ ಹೊರಟು ಬಂದವರು ಮತ್ತೆ ಮನೆಗೆ ವಾಪಾಸು ಹೋಗಿರಲಿಲ್ಲ ಎಂದು ಹೇಳಲಾಗುತ್ತಿದೆ. ಪತ್ನಿ ಪದ್ಮಾವತಿಯವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.