ನ್ಯೂಸ್ ನಾಟೌಟ್ : ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ನ.19 ಕ್ಕೆ ಶನಿವಾರದಂದು ಮಂಗಳೂರಿನ ಬಾವುಟ ಗುಡ್ಡಯೆಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಲೋಕಾರ್ಪಣೆ ಮಾಡಲಿದ್ದಾರೆ.
ಆರಂಭದಲ್ಲಿ ಮಂಗಳೂರಿನ ನೆಹರು ಮೈದಾನದಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಸಭಾ ಕಾರ್ಯಕ್ರಮದ ಸ್ಥಳವನ್ನು ಬದಲಾವಣೆ ಮಾಡಲಾಗಿದೆ ಎಂದು ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಸಮಿತಿಯವರು ತಿಳಿಸಿದ್ದಾರೆ.
ಆದರೆ ಇದೀಗ ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರವನ್ನು ನಡೆಸಲಾಗುವುದು ಎಂದು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ ಜಿಲ್ಲಾ ಸದಸ್ಯೆ ಚಿದಾನಂದ ಬೈಲಾಡಿ ತಿಳಿಸಿದ್ದಾರೆ.