ನ್ಯೂಸ್ ನಾಟೌಟ್: ಮಂಗಳೂರು ಸೇರಿದಂತೆ ಕೇರಳ ಹಾಗೂ ಬೆಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
132 ಕೆ.ಜಿ ಗಾಂಜಾ ಪತ್ತೆ ಯಾಗಿದೆ ಎಂದು ತಿಳಿದು ಬಂದಿದೆ. ಇದನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು, ಮಂಗಳೂರು ಹಾಗೂ ಕೇರಳದಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳದ ರಮೀಝ್ ರಾಝ್ ಹಾಗೂ ಮಂಜೇಶ್ವರದ ಅಬ್ದುಲ್ ಖಾದರ್ ಎಂಬ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಾಗಾಟ ಮಾಡಲು ಬಳಸಿದ್ದ ಕಾರು ಹಾಗೂ ಗಾಂಜಾದ ಒಟ್ಟು ಮೊತ್ತ 39.15 ಲಕ್ಷ ರೂಪಾಯಿ ಮೌಲ್ಯದ ಎಂದು ಪೊಲೀಸರು ತಿಳಿಸಿದ್ದಾರೆ.