ನ್ಯೂಸ್ ನಾಟೌಟ್ : ಮಹಿಳೆಯೊಬ್ಬರು ಹೆರಿಗೆಯಾದ 12ನೇ ದಿನಕ್ಕೆ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತರನ್ನು ಸುಳ್ಯ ತಾಲೂಕು ಜಟ್ಟಿಪಳ್ಳದ ನಿವಾಸಿ ಲೀಲಾ ಎಂಬವರ ಪುತ್ರಿ ಗೀತಾ (30) ಎಂದು ತಿಳಿದು ಬಂದಿದೆ. ಲೀಲಾ ಅವರನ್ನು ಚೊಕ್ಕಾಡಿಯ ಜಗದೀಶ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ಗಂಡು ಮಗುವಿದೆ. ಎರಡನೇ ಮಗುವಿನ ಹೆರಿಗೆಗಾಗಿ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆರಿಗೆಯಾಗಿ ಕೇವಲ 12ನೇ ದಿನಕ್ಕೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.