ನ್ಯೂಸ್ ನಾಟೌಟ್ : ಮಂಗಳೂರಿನಲ್ಲಿ ರಿಕ್ಷಾದೊಳಗೆ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನುಶೀಘ್ರವೇ ಎನ್ಐಎ (ರಾಷ್ಟ್ರೀಯ ತನಿಖಾ ದಳ)ಕ್ಕೆ ವಹಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಈ ಬಗ್ಗೆ ಸ್ವತಃ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಎನ್ ಐಎ ಕಚೇರಿ ಸ್ಥಾಪನೆಗೆ ಸರ್ವ ಪ್ರಯತ್ನ ನಡೆಸಲಾಗುತ್ತಿದೆ. ದುಷ್ಕರ್ಮಿಯ ಹಿಂದಿನ ಶಕ್ತಿಯ ಬಗ್ಗೆಯೂ ಸಂಪೂರ್ಣ ತನಿಖೆ ನಡೆಯಲಿದೆ ಎಂದು ತಿಳಿಸಿದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಎನ್ಐಎ ಅಧಿಕಾರಿಗಳು ನಮ್ಮ ಜತೆಗೆ ಇದ್ದಾರೆ. ಮತಾಂಧ ಶಕ್ತಿಗಳನ್ನು ಪೂರ್ಣ ಮಟ್ಟ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಸಂತ್ರಸ್ತ ಆಟೋ ಚಾಲಕನಿಗೆ ಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ಕುಟುಂಬಕ್ಕೂ ಪರಿಹಾರ ಒದಗಿಸಲು ಸಿಎಂ ಜತೆ ಚರ್ಚಿಸಲಾಗುವುದು ಅರಗ ತಿಳಿಸಿದರು.