ನ್ಯೂಸ್ ನಾಟೌಟ್: ಮಹಿಳೆಯೊಬ್ಬರ ಮೃತದೇಹ ಮನೆಯ ಅಂಗಳದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ನ.26ರಂದು ಪತ್ತೆಯಾಗಿದೆ.
ಪುತ್ತೂರಿನ ಕುಂಬ್ರದಲ್ಲಿರುವ ಅವರ ಮನೆಯಲ್ಲಿ ರಾತ್ರಿ ಊಟ ಮುಗಿಸಿ ನಬೀಸ ಮಲಗಿದ್ದರು. ಆದರೆ ಬೆಳಗ್ಗೆ ವೇಳೆ ಇವರ ಶವ ಮನೆಯ ಅಂಗಳದ ಎದುರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಕಿ ತಗುಲಿದ ಅಥಾವ ತಾನೇ ಬೆಂಕಿ ಹಚ್ಚಿಕೊಂಡಿದ್ದ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ನಬೀಸ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.