ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಬಗ್ಗೆ ವೈದ್ಯಕೀಯ ಪ್ರಕೋಷ್ಟ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಈಗಾಗಲೇ ನಾವು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವ ಘೋಷಣೆ ಮಾಡಿರುತ್ತೇವೆ ಎಂದರು. ಈ ಸಂದರ್ಭದಲ್ಲಿ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ ರಾಮಚಂದ್ರ ಕಾಮತ್, ಡಾ ವಿದ್ಯಾಧರ ಶೆಟ್ಟಿ, ಮಧುಸೂಧನ್ ಹೇರೂರು, ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ಶ್ರೀನಾಥ್, ಮಿಲ್ಟನ್ ಒಲಿವರ್, ರಾಘವೇಂದ್ರ ಪ್ರಭು ಕವಾ೯ಲು ಹಾಜರಿದ್ದರು.
- +91 73497 60202
- [email protected]
- November 23, 2024 11:17 PM