ನ್ಯೂಸ್ ನಾಟೌಟ್: ವಿವಾಹ ಪೂರ್ವ ಸೆಕ್ಸ್ ತಡೆಯಲು ಇಂಡೋನೇಷ್ಯಾ ಸರಕಾರ ಹೊಸ ಕ್ರಿಮಿನಲ್ ಕಾನೂನು ಜಾರಿಗೆ ತರಲು ಸಜ್ಜಾಗಿದೆ. ಅದಕ್ಕಾಗಿ ಕರಡನ್ನೂ ಸಿದ್ಧಪಡಿಸಿದೆ. ಶೀಘ್ರವೇ ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಲಾಗಿದೆ. ತಮ್ಮ ಪತಿ ಅಥವಾ ಪತ್ನಿಯಲ್ಲದವರ ಜೊತೆ ಇನ್ನು ಮುಂದೆ ಲೈಂಗಿಕ ಸಂಪರ್ಕ ಹೊಂದಿದರೆ ಅಂತಹವರಿಗೆ ವ್ಯಭಿಚಾರ ಕಾನೂನಿನಡಿ ಶಿಕ್ಷೆ ವಿಧಿಸಲಾಗುವುದು. ಇದನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲು ಅವರ ಪತಿ, ಪತ್ನಿ ಅಥವಾ ಪೋಷಕರು ದೂರು ನೀಡಬೇಕು. ಅಲ್ಲದೇ ಕೋರ್ಟ್ನಲ್ಲಿ ವಿಚಾರಣೆ ಆರಂಭವಾಗುವ ಮೊದಲು ಈ ದೂರನ್ನು ಹಿಂಪಡೆಯಬಹುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.
ಹೊಸ ಕ್ರಿಮಿನಲ್ ಕಾನೂನು ಪ್ರಕಾರ ವಿವಾಹ ಪೂರ್ವ ಸೆಕ್ಸ್ ಮಾಡಿದ್ರೆ ಅಂತಹವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದು ಎಂದು ಸರ್ಕಾರ ಹೇಳಿದೆ. ಪತಿ ಅಥವಾ ಪತ್ನಿ ಸಂಬಂಧ ಇಲ್ಲದವರೊಂದಿಗೆ ಸಂಭೋಗಿಸಿದರೆ ಅದನ್ನು ವ್ಯಬಿಚಾರವೆಂದು ಪರಿಗಣಿಸಿ ಆರ್ಟಿಕಲ್ 413ರಲ್ಲಿ ಉಲ್ಲೇಖಿಸಿ ಗರಿಷ್ಠ 1 ವರ್ಷ ಜೈಲು ಶಿಕ್ಷೆ ಅಥವಾ ಗರಿಷ್ಠ ದಂಡವನ್ನು ವಿಧಿಸಲಾಗುತ್ತದೆ ಎಂದು ಇಂಡೋನೇಷ್ಯಾ ಎಂದು ತಿಳಿಸಲಾಗಿದೆ. ‘ಇಂಡೋನೇಷ್ಯಾ ದೇಶದ ಮೌಲ್ಯಗಳಿಗೆ ತಕ್ಕಂತೆ ಕ್ರಿಮಿನಲ್ ಕಾನೂನು ರೂಪಿಸಿರುವುದು ನಮ್ಮ ಹೆಮ್ಮೆ. ಮುಂದಿನ ಸಂಸತ್ತಿನಲ್ಲಿ ಹೊಸ ಶಾಸನವಾಗಿ ಈ ಕ್ರಿಮಿನಲ್ ಕೋಡ್ ಅಂಗೀಕಾರವಾಗಲಿದೆ’ ಎಂದು ಉಪ ಕಾನೂನು ಮಂತ್ರಿ ಎಡ್ವರ್ಡ್ ಒಮರ್ ಷರೀಫ್ ಹೇಳಿದ್ದಾರೆ.