ನ್ಯೂಸ್ ನಾಟೌಟ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳ ಶವ ಮನೆಯಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ.
ಆಕೆ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಈಕೆ ಯಾವ ಕಾರಣಕ್ಕೆ ಈ ಕೃತ್ಯಕ್ಕೆ ಕೈ ಹಾಕಿದ್ದಾಳೆ ಎನ್ನುವ ಬಗ್ಗೆ ಇದುವರೆಗೂ ಮಾಹಿತಿ ಹೊರಬಿದ್ದಿಲ್ಲ. ಆದರೆ ಮಾನಸಿಕ ಖಿನ್ನತೆಗೆ ಒಳಗಾಗಿ ಇಂತಹ ತೀರ್ಮಾನಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ. ಇದೀಗ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದೆ. ಆದರೆ ನೈಜ ಕಾರಣ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.