ಸುಳ್ಯ: ತಾಲೂಕಿನ ಜಾಲ್ಸೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಆ.15ರಂದು ಧ್ವಜಾರೋಹಣ ನೆರವೇರಿಸಿ ಪ್ರತಿಜ್ಞಾವಿಧಿ ಭೋದಿಸಿದರು. ಬಳಿಕ ಸುಳ್ಯ ತಾಲೂಕು ಮಟ್ಟದ ರೈತಬಂಧು ಅಭಿಯಾನಕ್ಕೆ ಮಾದರಿ ಎರೆಹುಳು ಘಟಕವನ್ನು ಅನಾವರಣಗೊಳಿಸುವ ಮೂಲಕ ಚಾಲನೆ ನೀಡಲಾಯಿತು. ಸುಳ್ಯ ತಾಲೂಕು ಮಟ್ಟದ ಎರೆಹುಳು ಘಟಕವನ್ನು ಜಾಲ್ಸೂರು ಗ್ರಾಮ ಪಂಚಾಯತಿ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷ ಬಾಬು ಅವರು ಉದ್ಘಾಟಿಸಿದರು.
ಸುಳ್ಯ ತಾ.ಪಂ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಸರೋಜಿನಿ ಅವರು ಮಾತನಾಡಿ ಆಗಸ್ಟ್ 15ರಿಂದ ಅಕ್ಟೋಬರ್ 15ರವರೆಗೆ ರೈತಬಂಧು ಅಭಿಯಾನ ಚಾಲನೆಯಲ್ಲಿದ್ದು, ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ರೈತರಿಗೆ ಎರಹುಳು ತೊಟ್ಟಿ ನಿರ್ಮಾಣ ಮಾಡಲು 27,000 ದಷ್ಟು ಆರ್ಥಿಕ ನೆರವನ್ನು ನೀಡಲಾಗುತ್ತಿದೆ. ಅರ್ಹ ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ನೆನಪಿಗಾಗಿ ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಹಾಗೂ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ ಅವರು ಜಂಟಿಯಾಗಿ ತೆಂಗಿನಸಸಿ ನೆಡುವುದರ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ.ಎಂ ಬಾಬು, ಉಪಾಧ್ಯಕ್ಷರಾದ ಶ್ರೀಮತಿ ಲೀಲಾವತಿ, ಈ ಸಂದರ್ಭದಲ್ಲಿ ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ ,ಸದಸ್ಯರುಗಳಾದ ಸತೀಶ ಕೆಮನಬಳ್ಳಿ, ಸಂದೀಪ್ ಪಿ.ಆರ್. ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶಿವಪ್ರಸಾದ್ ನೀರಬಸಿರೆ, ಶ್ರೀಮತಿ ದೀಪಾ ಅಜಕಳಮೂಲೆ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಶ್ರೀಮತಿ ಅಂಬಿಕಾ ಎಸ್.ಅರ್. , ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಮುಜೀಬ್ ಪೈಚಾರು, ವಿಜಯ ಅಡ್ಕಾರು, ಈಶ್ವರ ನಾಯ್ಕ ಸೋಣಂಗೇರಿ, ಜಾಲ್ಸೂರು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಹರೀಶ್ ಶೆಟ್ಟಿ ಕಾಟೂರು, ಉಪಾಧ್ಯಕ್ಷೆ ಪುಷ್ಪಾ ಸುಡುಕೆರಿಗುಡ್ಡೆ, ಮುಖ್ಯ ಬರಹಗಾರರಾದ ಸೌಮ್ಯ ಕದಿಕಡ್ಕ, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಚಂದ್ರಕಲಾ, ಸವಿತ ಸೇರಿದಂತೆ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎರೆಹುಳು ತೊಟ್ಟಿ ನಿರ್ಮಾಣ ಹಾಗೂ ಗೊಬ್ಬರ ತಯಾರಿಕೆ ವಿಧಾನಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಎರೆಹುಳು ತೊಟ್ಟಿ ನಿರ್ಮಾಣದ ಬೇಡಿಕೆಯನ್ನು ರೈತರು ಈ ಸಂದರ್ಭದಲ್ಲಿ ನೀಡಿದರು.