ನ್ಯೂಸ್ ನಾಟೌಟ್ :ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಮಂಗಳೂರು ವಕೀಲರ ಸಂಘ ಆರೋಪಿಸಿದೆ.
ನ್ಯಾಯಾಲಯದಲ್ಲಿ ವಚಾರಣೆಯ ಹಂತದಲ್ಲಿರುವ ಸಿವಿಲ್ ವ್ಯಾಜ್ಯವೊಂದರಲ್ಲಿ ಪ್ರತಿವಾದಿ ವಿರುದ್ದ ಪ್ರತಿಬಂಧಕಾಜ್ಞೆ ಇದ್ದರೂ ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ರಾತ್ರಿ ವೇಳೆ ಮನೆಗೆ ಪ್ರವೇಶ ಮಾಡಿ ಅವರನ್ನು ಎಳೆದುಕೊಂಡು ಹೋಗುವ ಮೂಲಕ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಮಂಗಳೂರು ವಕೀಲ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೌರ್ಜನ್ಯದ ತನಿಖೆ ವರದಿ ಕೊಡುವಂತೆ ಬಂಟ್ವಾಳ ನ್ಯಾಯಾಲಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹಾಗೂ ಪೊಲೀಸರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸರ್ಕಾರವನ್ನು ಒತ್ತಾಯಿಸಿದೆ. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.