ನ್ಯೂಸ್ ನಾಟೌಟ್: ವೈದ್ಯರು ದೇವರಿಗೆ ಸಮಾನ ಅನ್ನುವ ಕಾಲವಿತ್ತು. ಈಗ ಕಾಲ ಹಾಗೆ ಇಲ್ಲವೇನೋ ಅನ್ನಿಸುವಂತಹ ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಿದೆ.
ಸ್ಕ್ಯಾನಿಂಗ್ ಸೆಂಟರ್ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆರೋಪವೊಂದು ಕೇಳಿ ಬಂದಿದೆ. ಆನೇಕಲ್ ಪಟ್ಟಣದಿಂದಲ್ಲಿ ಖಾಸಗಿ ಸ್ಕ್ಯಾನಿಂಗ್ ಸೆಂಟರ್ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ಆರೋಪ ಕೇಳಿಬಂದಿದೆ. ಸ್ಕ್ಯಾನಿಂಗ್ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿರುವ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಏನಿದು ಘಟನೆ..?
ಹೊಟ್ಟೆ ನೋವಿನ ಕಾರಣ ಪತಿಯೊಂದಿಗೆ ಮಹಿಳೆ ಸ್ಕ್ಯಾನಿಂಗ್ ಸೆಂಟರ್ಗೆ ಹೋಗಿದ್ದಳು. ಈ ವೇಳೆ ಸ್ಕ್ಯಾನಿಂಗ್ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಮಹಿಳೆ ಖಾಸಗಿ ಅಂಗಗಳಿಗೆ ಕೈ ಹಾಕಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿರುವ ಆರೋಪಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ. ಘಟನೆಯ ದೃಶ್ಯವನ್ನು ಸಂತ್ರಸ್ತ ಮಹಿಳೆ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದಾಳೆ. ಆದರೆ, ಪೊಲೀಸರು ಆರೋಪಿ ಜಯಕುಮಾರ್ನನ್ನು ಈವರೆಗೆ ಬಂಧಿಸಿಲ್ಲ. ಬದಲಾಗಿ ಠಾಣೆಗೆ ಕರೆಸಿ ಬಿಟ್ಟುಕಳುಹಿಸಿದ್ದಾರೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.













