ನ್ಯೂಸ್ ನಾಟೌಟ್ : ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಅದರ ಬೆನ್ನಲ್ಲೆ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜೊಂದರಲ್ಲಿ ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡಗನ ಜತೆ ಹೋಗಿದ್ದಾಳೆ ಎನ್ನಲಾದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಏನಿದು ಘಟನೆ?
ಮುಸ್ಲಿಂ ವಿದ್ಯಾರ್ಥಿ ಜತೆಗೆ ಹಿಂದೂ ವಿದ್ಯಾರ್ಥಿನಿ ಹೋದ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಡಿಬಾರ್ ಮಾಡಲಾಗಿದೆ. ಆದರೆ ವಿದ್ಯಾರ್ಥಿಯನ್ನು ಡಿಬಾರ್ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ವಿರುದ್ಧ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ‘ಶಿಕ್ಷೆ ಇಬ್ಬರಿಗೂ ಆಗಬೇಕು . ಜಿಹಾದಿಯನ್ನು ಡಿಬಾರ್ ಮಾಡದಿದ್ದರೆ ಮುಂದಿನ ದಿನ ನಾವು ಮಾಡಬೇಕಾದ ಕೆಲಸ ಮಾಡುತ್ತೇವೆ’ ಎಂದು ಹಿಂದೂ ಕಾರ್ಯಕರ್ತರು ತಿಳಿಸಿದ್ದಾರೆ. ಹಾಗೂ ಮುಸ್ಲಿಂ ವಿದ್ಯಾರ್ಥಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ವಿಷಯ ಕೇಳಿ ಬರುತ್ತಿದೆ