ನ್ಯೂಸ್ ನಾಟೌಟ್ : ಇಂದಿನಿಂದ ಕರ್ನಾಟಕದೆಲ್ಲೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿ. 26 ರಿಂದ 3 ದಿನ ಮಳೆಯಾಗುವ ಸಾಧ್ಯತೆ ಇದೆ ಇಲಾಖೆ ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?
ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತ ತಮಿಳುನಾಡನ್ನು ಅಲ್ಲೋಲ ಕಲ್ಲೋಲವನ್ನಾಗಿಸಿತ್ತು. ಇದರ ಪ್ರಭಾವವು ಕರ್ನಾಟಕಕ್ಕು ತಟ್ಟಿತ್ತು. ಇದೀಗ ಮತ್ತೆ ಮಳೆರಾಯ ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ.ಬೆಂಗಳೂರು ನಗರ ಸೇರಿದಂತೆ , ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತದ ಪ್ರಭಾವದಿಂದ ಡಿ. 27 ಮತ್ತು 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇಂದು (ಡಿ. 26) ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.