ನ್ಯೂಸ್ ನಾಟೌಟ್:ವಿದೇಶಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.ದೇಶದಲ್ಲಿಯೂ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ ಗೆ ಕೊರೊನಾ ಶಾಕ್ ನೀಡಿದೆ.ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಜನರು ಗುಂಪುಗೂಡುವಂತಿಲ್ಲ:
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಸೂಚಿಸಿದ್ದಾರೆ.ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್, ಪಬ್, ಬಾರ್, ರೆಸ್ಟೋರೆಂಟ್ ಅದೇ ರೀತಿ ಬಸ್, ರೈಲು, ವಿಮಾನ ಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.ಆರೋಗ್ಯ ಸಮಸ್ಯೆ ಇರುವವರು, ವೃದ್ಧರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಆಯೋಜಿಸಬೇಕು ಎಂದಿದ್ದಾರೆ.
ಕೈಗಾರಿಕೆ ಸಂಸ್ಥೆ, ಗಾರ್ಮೆಂಟ್ಸ್ ಸಹಿತ ಇತರ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಧರಿಸಬೇಕು.ಜನರು ಗುಂಪುಗೂಡುವಂತಿಲ್ಲ.ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.