ನ್ಯೂಸ್ ನಾಟೌಟ್ :ಸುರತ್ಕಲ್ನ ಕೃಷ್ಣಾಪುರದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆಯನ್ನು ಮುಂದುವರಿಸುವಂತೆ ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಆದೇಶಿಸಿದ್ದಾರೆ.
ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಹಾಕಿದ್ದ ನಿಷೇಧಾಜ್ಞೆಯನ್ನು ಡಿ.೨೯ರಂದು ಬೆಳಗ್ಗೆ ಆರು ಗಂಟೆ ತನಕ ವಿಸ್ತರಿಸಲಾಗಿದೆ. ಮಂಗಳೂರು ನಗರವು ಅತೀ ಸೂಕ್ಷ್ಮ ಪ್ರದೇಶವಾಗಿದ್ದು,ಸಾರ್ವಜನಿಕರಲ್ಲಿ ಆತಂಕದ ವಾತಾವರಣವಿದೆ.ಸಣ್ಣ ಪುಟ್ಟ ವಿಚಾರಗಳು ಉದ್ವಿಗ್ನ ಗೊಂಡು ಯಾವುದೇ ಕ್ಷಣದಲ್ಲಾದರೂ ಶಾಂತಿ,ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ ಎಂದು ನಿರ್ಧರಿಸಿ ಆದೇಶ ಹೊರಡಿಸಲಾಗಿದೆ.