ನ್ಯೂಸ್ ನಾಟೌಟ್ : ಮಂಗಳೂರಿನ ನಂತೂರು ಜಂಕ್ಷನ್ ಬಳಿ ಬೆಂಗಳೂರು ಆರ್ ಟಿ ಒ ನೋಂದಣಿಯ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಚಲಿಸುತ್ತಿದ್ದ ಕಾರಿನ ಎಂಜಿನ್ ಭಾಗದಲ್ಲಿ ಹೊಗೆಯೊಂದಿಗೆ ಬೆಂಕಿ ಅವರಿಸಿಕೊಂಡಿದೆ. ಅದೇ ಸಮಯದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಬೆಂಕಿ ಆರಿಸುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿದು ಬಂದಿದೆ.













