ನ್ಯೂಸ್ ನಾಟೌಟ್: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅಸ್ವಸ್ಥರಾಗಿದ್ದು ಅವರನ್ನು ಅಹ್ಮದಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗ್ಗೆ ಶತಾಯುಷಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣ ಅವರನ್ನು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಗುಜರಾತ್ನ ಅನೇಕ ಶಾಸಕರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಸದ್ಯ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ. 2016ರಲ್ಲೂ ಹೀರಾಬೆನ್ ಅವರ ಆರೋಗ್ಯ ಹದಗೆಟ್ಟಿತ್ತು. ಅವರು ಅಹಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸದ್ಯ ಹೀರಾಬೆನ್ ಅವರು ಮತ್ತೊಬ್ಬ ಪುತ್ರ ಪಂಕಜ್ ಭಾಯ್ ನಿವಾಸದಲ್ಲಿ ವಾಸಿಸುತ್ತಿದ್ದಾರೆ. ಪ್ರಧಾನಿ ಮೋದಿ ಅಹಮದಾಬಾದ್ಗೆ ನೀಡಿ ತಾಯಿಯ ಆರೋಗ್ಯ ವಿಚಾರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.