ನ್ಯೂಸ್ ನಾಟೌಟ್: ಪ್ರಧಾನಿ ಮೋದಿ ತಾಯಿ ಹೀರಾಬೇನ್ ನಿಧನರಾಗಿದ್ದಾರೆ.ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ನ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಹೀರಾ ಬೆನ್ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಪ್ರಧಾನಿ ಮೋದಿಯವರು ಟ್ವೀಟ್ ನಲ್ಲಿ ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದೆರಡು ದಿನಗಳ ಹಿಂದೆ ಅಹಮದಾಬಾದ್ ನ ಯು.ಎನ್. ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದರು.
ಭಾವುಕರಾದ ಮೋದಿ!
ತಮ್ಮ ತಾಯಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ.ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಅಂತ ಬರೆದು ಪೋಸ್ಟ್ ಮಾಡಿದ್ದಾರೆ.
ಹೀರಾಬೆನ್ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.