ನ್ಯೂಸ್ ನಾಟೌಟ್ : ಇತ್ತೀಚೆಗಷ್ಟೇ ಅಸೌಖ್ಯಕ್ಕೆ ಒಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟ ಘಟನೆ ನಡೆದಿದೆ.ಅರಂತೋಡು ಗ್ರಾಮದ ಉದಯನಗರ ಸಮೀಪದ ಉಳುವಾರು ನಿವಾಸಿ ಮಧುಸೂದನ ಎಂಬವರು ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕುಸಿದು ಬಿದ್ದಿದ್ದ ಯುವಕ:
ಕೆಲ ದಿನಗಳ ಹಿಂದೆ ಯುವಕ ಮಧುಸೂದನ ಅವರು ಪೆರಾಜೆ ಭಾಗದಲ್ಲಿ ಕೆಲಸ ಮಾಡುತ್ತಿರುವಾಗ ಅಸೌಖ್ಯಕ್ಕೆ ಒಳಗಾಗಿ ಕುಸಿದು ಬಿದ್ದರು. ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ಕೊಡಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ತಾಯಿ, ಇಬ್ಬರು ಸಹೋದರರು, ಸಂಬಂಧಿಕರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.