21.6 C
Sullia
Sunday, March 8, 2026

ಮಂಗಳೂರು: ಪಣಂಬೂರಿನಲ್ಲಿ ಸರಣಿ ಅಪಘಾತ, ಎರಡು ವಾಹನದ ನಡುವೆ ಸಿಲುಕಿ ಅಪ್ಪಚ್ಚಿಯಾದ ರಿಕ್ಷಾ..!, ಮೂವರು ಸ್ಥಳದಲ್ಲೇ ಸಾವು..!

ನ್ಯೂಸ್ ನಾಟೌಟ್ : ಮಂಗಳೂರು ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಪಣಂಬೂರು ಸಿಗ್ನಲ್ ಬಳಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

View Post

Related Articles

LEAVE A REPLY

Please enter your comment!
Please enter your name here

Latest Articles