ನ್ಯೂಸ್ ನಾಟೌಟ್ : ಹೊಸ ವರ್ಷದ ಸಂಭ್ರಮದ ಬೆನ್ನಲ್ಲೇ ಗ್ಯಾಸ್ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ೨೫ ರೂ. ಹೆಚ್ಚಳಾಗಿದ್ದು, ಹೊಸವರ್ಷದ ಸಂಭ್ರಮದಲ್ಲಿದ್ದ ಜನತೆಗೆ ತೈಲ ಮಾರುಕಟ್ಟೆ ಕಂಪನಿ ಶಾಕ್ ನೀಡಿದೆ.ನೂತನ ವರ್ಷದ ಮೊದಲ ದಿನವೇ ಎಲ್ಪಿಜಿ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು ಗ್ರಾಹಕರಿಗೆ ತಲೆನೋವನ್ನುಂಟು ಮಾಡಿದೆ.
ಜ.1 ರಿಂದಲೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು 25ರೂ ಹೆಚ್ಚಳ ಮಾಡಲಾಗಿದೆ ಎಂದು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪೆನಿಗಳು (OMCS) ಹೇಳಿದೆ. ಕಳೆದ ವರ್ಷ ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಬೆಲೆಯಲ್ಲಿ ಒಟ್ಟು 153.5ರೂ ಏರಿಕೆಯಾಗಿತ್ತು ಈ ವರ್ಷದ ಮೊದಲ ದಿನವೇ ಇನ್ನೂ ಹೆಚ್ಚಳ ಮಾಡಲಾಗಿದೆ.ಗ್ಯಾಸ್ ಸಿಲಿಂಡರ್ ಗಳ ಬೆಲೆ ಏರಿಕೆ ಹಿನ್ನಲೆ ಆಹಾರ ಪದಾರ್ಥಗಳ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಹೊಟೇಲ್,ರೆಸ್ಟೋರೆಂಟ್ ಗಳಲ್ಲಿ ಆಹಾರ ಪದಾರ್ಥಗಳಲ್ಲಿ ಬೆಲೆ ಏರಿಕೆಯಾಗುವ ಸಾಧ್ಯತೆಗಳು ಇರಬಹುದು ಎಂದು ಹೇಳಲಾಗುತ್ತಿದೆ.