ನ್ಯೂಸ್ ನಾಟೌಟ್ : ಡಂಪಿಂಗ್ ಯಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡು, ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದ ಘಟನೆ ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ಬಳಿ ನಡೆದಿದೆ.ಬಿಸಿಲ ಬೇಗೆಯಿಂದ ಮಿಥೇನ್ ಗ್ಯಾಸ್ ಉತ್ಪತ್ತಿಯಾಗಿ ಬೆಂಕಿ ಉತ್ಪತ್ತಿಯಾಗಿದ್ದು, ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಕೆನ್ನಾಲಿಗೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನೆಯಿಂದ ಸುತ್ತಮುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ ಅವರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೆಸಿಬಿ ಹಾಗೂ ಸುಮಾರು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿತು.ಸ್ಥಳಕ್ಕೆ ಸ್ಥಳೀಯ ಶಾಸಕ ಭರತ್ ಶೆಟ್ಟಿ ಭೇಟಿ ನೀಡಿದರು. ತ್ಯಾಜ್ಯ ವಿಲೇವಾರಿ ಘಟಕದ ಬೆಂಕಿ ನಂದಿಸಲು ಅಗ್ನಿಶಾಮಕ ತಂಡ ಶ್ರಮಿಸಿತು. ಸ್ಥಳೀಯ ಕಾರ್ಪೊರೇಟರ್ ಸಹಿತ ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು.