ನ್ಯೂಸ್ ನಾಟೌಟ್ : ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2022-23 ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟವು ಕೆ.ವಿ.ಜಿ ಕ್ರೀಡಾ ಮೈದಾನದಲ್ಲಿ ನಡೆಯಿತು.
ಸ್ವಸ್ಥ ಸಮಾಜಕ್ಕೆ ಕ್ರೀಡೆ ಅವಶ್ಯಕ:
ನಗರ ಪಂಚಾಯತ್ ನ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಕ್ರೀಡಾಕೂಟವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು “ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಯು ಸಹಕಾರಿಯಾಗಿದೆ. ಸ್ವಸ್ಥ ಸಮಾಜದ ನಿರ್ಮಾಣವಾಗಬೇಕಾದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದಿರುವ ವ್ಯಕ್ತಿಗಳ ನಿರ್ಮಾಣವಾಗಬೇಕು. ಆ ನಿಟ್ಟಿನಲ್ಲಿ ಕ್ರೀಡೆಯು ಸಹಕಾರಿಯಾಗುತ್ತದೆ” ಎಂದು ಹೇಳಿದರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ.ಕೆ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಲಿಖಿತ್ ಎಸ್.ಆರ್ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ. ಅಕಾಡೆಮಿಕ್ ಡೀನ್ ಚಂದ್ರಶೇಖರ ಎಂ.ಎನ್, ಕ್ರೀಡಾ ಸಂಯೋಜಕರಾದ ಪ್ರದೀಪ್ .ಎಂ ಹಾಗೂ ಕುಶಾಲಪ್ಪ ಪಿ.ಆರ್, ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಸುನೀಲ್ ಕುಮಾರ್ ಎನ್.ಪಿ ಮತ್ತು ಪ್ರಮೋದ್ ಬಿ.ಡಿ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು. ಆರಂಭದಲ್ಲಿ ಎನ್.ಎಸ್.ಎಸ್.ಸ್ವಯಂ ಸೇವಕರ ಬ್ಯಾಂಡ್ ಸೆಟ್ ನೊಂದಿಗೆ ಆಕರ್ಷಕ ಪಥ ಸಂಚಲನ ನಡೆಯಿತು. ಕೆ.ವಿ.ಜಿ.ಡೆಂಟಲ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಭಾಸ್ಕರ ಬೆಲೆಗದ್ದೆ ಹಾಗೂ ಕೆ.ವಿ.ಜಿ.ಐ.ಪಿ.ಎಸ್ ನ ದೈಹಿಕ ಶಿಕ್ಷಣ ನಿರ್ದೇಶಕ ತೀರ್ಥವರ್ಣ ಕ್ರೀಡಾ ಕೂಟ ನಡೆಸಿಕೊಟ್ಟರು. ಕ್ರೀಡಾ ಸಂಯೋಜಕ ಪ್ರದೀಪ್ ಎಂ. ವಂದಿಸಿದರು. ಶಿಕ್ಷಕ ನಾರಾಯಣ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು.