ನ್ಯೂಸ್ ನಾಟೌಟ್: ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತನ ಶವ ಪತ್ತೆಯಾಗಿದೆ.
ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾಗಿತ್ತು. ಈ ಹಿನ್ನೆಲೆ ಯಲ್ಲಿ ಸಂಶಯಗೊಂಡು ಸಾರ್ವಜನಿಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ತನಿಖೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.
ಕೊಲೆಯೋ, ಅಪಘಾತವೋ, ಆತ್ಮಹತ್ಯೆಯೋ?
ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಬಳಿಕ ರಾಜೇಶ್ ಪೂಜಾರಿ ಮೃತದೇಹ ಪತ್ತೆಯಾಗಿತ್ತು. ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹ ಅನುಮಾನಗಳು ಹುಟ್ಟಿ ಕೊಂಡಿವೆ. ರಾಜೇಶ್ ಅವರು ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.