ನ್ಯೂಸ್ ನಾಟೌಟ್ :ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (63) ಎಂಬವರು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.ಇವರು ಮೂಲತಃ
ಮಂಗಳೂರಿನ ಕಾವೂರಿನವರೆಂದು ತಿಳಿದು ಬಂದಿದೆ.
ಏನಿದು ಘಟನೆ?
ಕಿಶೋರ್ ಕುಮಾರ್ ಟ್ಯಾಂಕರ್ ಚಲಾಯಿಸುತ್ತಿದ್ದಾಗ ಹೃದಯಾಘಾತಕ್ಕೀಡಾದರು. ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ ಚಾಲಕ ಟ್ಯಾಂಕರ್ನನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.