27.7 C
Sullia
Sunday, March 8, 2026

ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ ಪಾರಾದ 33 ಮಂದಿ

ನ್ಯೂಸ್ ನಾಟೌಟ್ : ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದ್ದು, ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಈ ಅಪಘಾತ ಸಂಭವಿಸಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತವಿಲ್ಲದೇ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ.

ಕೆಲ ಮಾಲಾಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles