ನ್ಯೂಸ್ ನಾಟೌಟ್ : ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಕೆಳಗೆ ಉರಿಯುತ್ತಿದ್ದ ದೀಪ ತಾಗಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಸಂಸದೆ ತಕ್ಷಣಕ್ಕೆ ಪ್ರತಿಕ್ರಿಯಿಸಿ ಕೈಯಿಂದಲೇ ಬೆಂಕಿ ನಂತಿದಿದ್ದಾರೆ ಮತ್ತು ಅವರು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.
ಭಾನುವಾರ ಜನವರಿ 15 ಕ್ಕೆಕರಾಟೆ ಸ್ಪರ್ಧೆಯನ್ನು ಉದ್ಘಾಟಿಸಲು ಪುಣೆಯ ಹಿಂಜಾವಾಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲೆ ಹಾಕುತ್ತಿದ್ದಾಗ ಅವರ ಸೀರೆಗೆ ಬೆಂಕಿ ಹೊತ್ತಿಕೊಂಡಿತು.
ಈ ಅಪಘಾತದಲ್ಲಿ ಸುಪ್ರಿಯಾ ಸುಳೆ ಅವರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂಬುದು ಸಮಾಧಾನದ ಸಂಗತಿ ಎಂದು ಅವರ ಕಛೇರಿ ಮಾಹಿತಿ ನೀಡಿದೆ.ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು.
“ಕರಾಟೆ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ನನ್ನ ಸೀರೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿತ್ತು. ಆದರೆ, ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸಲಾಯಿತು. ಹಿತೈಷಿಗಳು, ನಾಗರಿಕರು, ಪಕ್ಷದ ಕಾರ್ಯಕರ್ತರು, ಮುಖಂಡರ ಹಾರೈಕೆಯಿಂದ ನಾನು ಸುರಕ್ಷಿತವಾಗಿದ್ದು ಆತಂಕ ಪಡಬೇಡಿ ಎಂದು ಸಂಸದೆ ಸುಳೆ ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.”
ಈ ಘಟನೆಯ ನಂತರ ಸಂಸದರು ಬಾರಾಮತಿಗೆ ಭೇಟಿ ನೀಡಿದ್ದು, ಅವರ ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಎಂದು ಸುಳೆ ಅವರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.