ನ್ಯೂಸ್ ನಾಟೌಟ್ : ದೇವಿ ಮಾಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕಲಾವಿದರೊಬ್ಬರು ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಇಹಲೋಕ ತ್ಯಜಿಸಿದ ಘಟನೆ ಬಗ್ಗೆ ವರದಿಯಾಗಿದೆ.
ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಬಣ್ಣದ ಮನೆಯಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ.ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ಈ ದುರಂತ ಸಂಭವಿಸಿದೆ.
2ನೇ ಮೇಳದ ಪ್ರತಿಭಾನ್ವಿತ ಕಲಾವಿದ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿ.ಇವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.













