27.7 C
Sullia
Sunday, March 8, 2026

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಪ್ರಯುಕ್ತ ವಿಶೇಷ ಕಾರ್ಯಕ್ರಮ

ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಕ್ಕಳ ವಿಭಾಗದ ನೇತೃತ್ವದಲ್ಲಿ, ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗ, ಮತ್ತು ಕಮ್ಯುನಿಟಿ ಮೆಡಿಸಿನ್ ವಿಭಾಗಗಳ ಸಹಯೋಗದೊಂದಿಗೆ “ರಾಷ್ಟ್ರೀಯ ನವಜಾತ ಶಿಶು ಸಪ್ತಾಹ –2025” ಕಾರ್ಯಕ್ರಮವನ್ನು ಬುಧವಾರ (ನ.19) ಹಮ್ಮಿಕೊಳ್ಳಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರು ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ. ಚಿದಾನಂದ ಅವರು ಅಧ್ಯಕ್ಷತೆ ವಹಿಸಿ, ನವಜಾತ ಶಿಶುಗಳ ಆರೈಕೆ, ತಾಯಿಯ ಆರೋಗ್ಯ ಮತ್ತು ಆರೋಗ್ಯ ಸೇವೆಗಳ ಕುರಿತು ಮಾಹಿತಿ ನೀಡಿದರು.

ಮುಖ್ಯ ಅತಿಥಿ ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಭಾಗವಹಿಸಿ, ನವಜಾತ ಶಿಶು ಸಪ್ತಾಹದ ಮಹತ್ವದ ಕುರಿತು ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ ಸುಧಾ ರುದ್ರಪ್ಪ, ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗ ಮುಖ್ಯಸ್ಥರಾದ ಡಾ. ಗೀತಾ ದೊಪ್ಪಾ, ಕಮ್ಯುನಿಟಿ ಮೆಡಿಸಿನ್ ವಿಭಾಗದ ಗೌರವ ಪ್ರಾಧ್ಯಾಪಕರಾದ ಡಾ. ನಾರಾಯಣ ಹೊಳ್ಳ, ಅಸೋಸಿಯೇಟ್ ಪ್ರೊಫೆಸರ್ ಡಾ. ಅಪೂರ್ವ ದೊರೆ ಶಿಶು ಆರೈಕೆ, ತಾಯಿಯ ಆರೋಗ್ಯದ ಮಹತ್ವ ಹಾಗೂ ನವಜಾತ ಶಿಶು ಹಾಗೂ ತಾಯಿಯ ಆರೋಗ್ಯ ರಕ್ಷಣೆಗೆ ಸರಕಾರದ ಹಲವಾರು ಕಾರ್ಯಕ್ರಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಯಿ ಆರೈಕೆಯಲ್ಲಿ ಸಮಾಜದ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸಿದರು.

ಈ ವೇಳೆ ಮಕ್ಕಳ ವಿಭಾಗದ ಜೂನಿಯರ್ ರೆಸಿಡೆಂಟ್ ಡಾ. ಸಂಜಯ್ ಹಾಗೂ ಕಮ್ಯುನಿಟಿ ಮೆಡಿಸಿನ್ ವಿಭಾಗದ ಜೂನಿಯರ್ ರೆಸಿಡೆಂಟ್ ಡಾ. ಮಹಿಮಾ ರಾಷ್ಟ್ರೀಯ ನವಜಾತ ಶಿಶು ಸಪ್ತಾಹದ ಕುರಿತು ವಿಶೇಷ ಮಾಹಿತಿಯನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ನವಜಾತ ಶಿಶು ಆರೈಕೆಯ ಕುರಿತಾಗಿ ಜಾಗೃತಿ ಮೂಡಿಸುವ ಕಿರು ನಾಟಕ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲರು ಡಾ. ಪ್ರಮೋದ್ ಕೆ. ಜೆ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲರು ಚಂದ್ರಾವತಿ, ಡಾ ಸುನೀತಾ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಮಕ್ಕಳ ವಿಭಾಗದ ಜೂನಿಯರ್ ರೆಸಿಡೆಂಟ್ ಡಾ ಚೈತನ್ಯ ಪ್ರಾರ್ಥಿಸಿ, ಡಾ ಹರ್ಷಿತಾ ಎಂ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾದ್ಯಾಪಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles