ನ್ಯೂಸ್ ನಾಟೌಟ್ :ಮಂಗಳೂರಿನಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾದ ಡ್ರಗ್ಸ್ ಪ್ರಕರಣ ಇಡೀ ರಾಜ್ಯದಾದ್ಯಂತ ಬಾರಿ ಸಂಚಲನವುಂಟು ಮಾಡಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹದಿನೈದು ಮಂದಿಯನ್ನು ಬಂಧಿಸಲಾಗಿದ್ದು,ಇದೀಗ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರನ್ನು ಅಮಾನತು ಮಾಡಲಾಗಿದೆ ಎಂಬ ವಿಷಯ ತಿಳಿದು ಬಂದಿದೆ.
ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು.ಇದಕ್ಕೆ ಸಂಬಂಧಿಸಿ ಮತ್ತಷ್ಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ಇದಲ್ಲದೇ ಒಂದು ಖಾಸಗಿ ಕಾಲೇಜು ಆಸ್ಪತ್ರೆ ಮುಖ್ಯಸ್ಥರು ಪ್ರಕರಣದಲ್ಲಿ ಭಾಗಿಯಾದ್ದು, ಆ ಸಂಸ್ಥೆಯ ವಿದ್ಯಾರ್ಥಿ ಹಾಗೂ ವೈದ್ಯರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.