27.7 C
Sullia
Sunday, March 8, 2026

ಸುಳ್ಯ: ಎನ್ನೆoಪಿಯುಸಿಯಲ್ಲಿ ವಾರ್ಷಿಕ ಕ್ರೀಡಾಕೂಟ

ನ್ಯೂಸ್‌ ನಾಟೌಟ್: ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ನ. 20 ರಂದು ಆಯೋಜಿಸಲಾಯಿತು. ಎಒಎಲ್ಇ(ರಿ) ಸುಳ್ಯ ಇದರ ಉಪಾಧ್ಯಕ್ಷೆ ಶೋಭಾ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ಕೆಲಸದ ಮೇಲೆ ನಮಗೆ ಶ್ರದ್ಧೆ ಬೇಕು. ಆಗ ಯಶಸ್ಸು ಸಾಧ್ಯ. ಇಂದಿನ ಕ್ರೀಡಾಕೂಟ ಯಶಸ್ವಿ ಯಾಗಲಿ ಎಂದು ಶುಭ ಹಾರೈಸಿದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಮಾರಂಭ ಉದ್ಘಾಟಿಸಿ ಮಾತನಾಡಿದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಗ ವಿಭಾಗದ ಪ್ರಾಧ್ಯಾಪಕ, ವಿಭಾಗ ಮುಖ್ಯಸ್ಥರು ಹಾಗೂ ಖ್ಯಾತ ವೈದ್ಯ ಡಾ. ರಂಗನಾಥ್ ಎನ್ , ದೈಹಿಕ ಆರೋಗ್ಯಕ್ಕೆ ಕ್ರೀಡೆ ಬಹಳ ಮುಖ್ಯ. ವಿದ್ಯಾರ್ಥಿಗಳು ಒಳ್ಳೆಯ ಅಭಿರುಚಿಯಾಗಿ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕು ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯ ಡಾ. ರುದ್ರ ಕುಮಾರ್ ಎಂ ಎಂ. ಗೌರವ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ. ರೈ,ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ ಬಿ, ಉಪಸ್ಥಿತರಿದ್ದರು. ಎನ್ನೆoಸಿಯ ದೈ. ಶಿ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ ಡಿ,ಕೆವಿಜಿಎಂಸಿಎಚ್ ಇಲ್ಲಿನ ಉದ್ಯೋಗಿ ತೀರ್ಥಶ್ ಯಾದವ್ ಕ್ರೀಡಾಕೂಟಕ್ಕೆ ಸಹಕರಿಸಿದರು. ಶರಣ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಾಚಾರ್ಯರಾದ ಮಿಥಾಲಿ ಪಿ ರೈ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಕೌಶಿಕ್ ಜಿ ಪ್ರತಿಜ್ಞಾ ವಿಧಿ ಬೋಧಿಸಿದರು.ಉಪನ್ಯಾಸಕಿ ಸಾವಿತ್ರಿ ಕೆ ಮತ್ತು ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ ಬಿ. ನಿರೂಪಿಸಿ, ಹೆಡ್ ಬಾಯ್ ಯಶವಂತ್ ಕುಶಾಲಪ್ಪ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Latest Articles