ನ್ಯೂಸ್ ನಾಟೌಟ್: ಕಳೆದ ಕೆಲವು ವರ್ಷಗಳಿಂದ ಸಾಕಷ್ಟು ಅಪಘಾತ ಅನಾಹುತಗಳಿಗೆ ಸಾಕ್ಷಿಯಾಗಿದ್ದ ಕಡೆಪಾಲದಲ್ಲಿ ಇದೀಗ ಮತ್ತೊಂದು ಭಾರಿ ಅಪಘಾತ ಸಂಭವಿಸಿದೆ. ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ಮಗುಚಿ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿವೆ.
ಸುಳ್ಯ ತಾಲೂಕಿನ ಕಲ್ಲುಗುಂಡಿ ಸಮೀಪದ ಕಡೆಪಾಲ ಎಂಬಲ್ಲಿ ಜ.24 ರಾತ್ರಿ ತಿರುವಿನಲ್ಲಿ ಕೋಳಿ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ವೇಳೆ ಚಾಲಕ ರಾಮಚಂದ್ರ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಪುತ್ತೂರು ಕಡೆಗೆ ಪಿಕಪ್ ಚಲಿಸುತ್ತಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಲ್ಲುಗುಂಡಿ ಪೊಲೀಸರು ಭೇಟಿ ನೀಡಿದ್ದಾರೆ.