ನ್ಯೂಸ್ ನಾಟೌಟ್ : ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ಅಪರಿಚಿತ ವ್ಯಕ್ತಿಗಳು ಸಚಿವರ ಟಾರ್ಗೆಟ್ ಮಾಡಿ ಅವರ ಎದೆಗೆ ಗುಂಡಿಟ್ಟಿದ್ದಾರೆ .
ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಜರಾಜನಗರಕ್ಕೆ ತೆರಳುತ್ತಿದ್ದಾಗ ದಾಳಿ ನಡೆದಿದೆ. ನಬಾ ಕಿಶೋರ್ ದಾಸ್ ಅವರು ವಾಹನದಿಂದ ಇಳಿಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ದಾಳಿಯ ಹಿಂದಿನ ನಿಖರವಾದ ಕಾರಣ ತಿಳಿದುಬಂದಿಲ್ಲ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ದಾಸ್ರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು. ಗುಂಡಿನ ದಾಳಿಯ ನಂತರ ಬಿಜೆಡಿ ಕಾರ್ಯಕರ್ತರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.