ಮೈಸೂರು : ಎಂಬಿಎ ವಿದ್ಯಾರ್ಥಿನಿ ಮೇಲೆ ಐದು ಮಂದಿಯ ತಂಡ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮೈಸೂರಿನಿಂದ ವರದಿಯಾಗಿದೆ. ಮಂಗಳವಾರ ರಾತ್ರಿ ವೇಳೆ ಸ್ನೇಹಿತನ ಜೊತೆ ವಿದ್ಯಾರ್ಥಿನಿ ಚಾಮುಂಡಿ ಬೆಟ್ಟಕ್ಕೆ ತೆರಳಿ ವಾಪಸ್ ಬರುವಾಗ ಅಡ್ಡಗಟ್ಟಿದ ಕಾಮುಕರು ಈ ಕೃತ್ಯ ಎಸಗಿದ್ದಾರೆ. ಮೈಸೂರು ನಿವಾಸಿ ಖಾಸಗಿ ಕಾಲೇಜು ವಿದ್ಯಾರ್ಥಿನಿ ತನ್ನ ಗೆಳೆಯನೊಂದಿಗೆ ಬೆಟ್ಟಕ್ಕೆ ತೆರಳಿದ ವೇಳೆ ಆಕೆಯ ಮೇಲೆ ಐದಾರು ಮಂದಿ ಪಾನಮತ್ತ ಯುವಕರಿದ್ದ ತಂಡವೊಂದು ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದ್ದು, ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
- +91 73497 60202
- [email protected]
- November 27, 2024 10:25 AM