ನ್ಯೂಸ್ ನಾಟೌಟ್ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಟೆಕ್ಕಿಯೊಬ್ಬ ಸರಿಯಾದ ಚಿಕಿತ್ಸೆ ಸಿಗದೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ವರ್ತೂರಿನ 35 ವರ್ಷದ ಆನಂದ್ ಮೃತ ಟೆಕ್ಕಿ. ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಕೆಲಸ ಮಾಡುತ್ತಿದ್ದ ಆನಂದ್ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ನಿನ್ನೆ ರಾತ್ರಿ 10:45 ಕ್ಕೆ ಅಪಘಾತ ನಡೆದಿತ್ತು. ಅಪಘಾತವಾಗಿ ರಸ್ತೆಯಲ್ಲಿ ಟೆಕ್ಕಿ ರಸ್ತೆಯಲ್ಲಿ ಬಿದ್ದಿದ್ದರು. ಗಾಯಾಳುವನ್ನ ಆಸ್ಪತ್ರೆಗೆ ಸೇರಿಸಲು ಅಂಬುಲೆನ್ಸ್ಗೆ ಸಾರ್ವಜನಿಕರು ಕರೆ ಮಾಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಟೆಕ್ಕಿಯನ್ನು ಅಂಬುಲೆನ್ಸ್ಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ರೇಲ್ವೆ ಕೆಳಸೇತುವೆ ಮೂಲಕ ಅಂಬುಲೆನ್ಸ್ ಪಾಸಾಗದೆ ಪರದಾಟ ನಡೆಸಿತ್ತು.
ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













