Uncategorized

ಖ್ಯಾತ ಗಾಯಕಿ ವಾಣಿ ಜಯರಾಂ ನಿಗೂಢ ಸಾವು

ನ್ಯೂಸ್ ನಾಟೌಟ್ : ಐದು ದಶಕಗಳ ಕಾಲ ತಮ್ಮ ಸುಮಧುರ ಕಂಠದಿಂದಲೇ ಅಪಾರ ಅಭಿಮಾನಿ ಬಳಗವನ್ನೇ ಹೊಂದಿದ್ದ ವಾಣಿ ಜಯರಾಂ(78) ಅವರು ವಿಧಿವಶರಾಗಿದ್ದಾರೆ. ಚನ್ನೈನ್ಲಲಿರುವ ತಮ್ಮ ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಗಾಯಕಿ ಸಾವಿಗೆ ಕಾರಣ ಏನು ಅನ್ನುವುದು ತಿಳಿದು ಬಂದಿಲ್ಲ. ನಿಗೂಢವಾಗಿ ಸಾವನ್ನಪ್ಪಿರುವುದರ ಹಿಂದೆ ಹಲವು ಅನುಮಾನ ವ್ಯಕ್ತವಾಗಿದೆ.

ವಾಣಿ ಜಯರಾಮ್ ಕನ್ನಡ ಸೇರಿ ತಮಿಳು, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಬಂಗಾಳಿ ಮತ್ತು ತುಳು ಸೇರಿದಂತೆ 19 ಭಾರತೀಯ ಭಾಷೆಗಳಲ್ಲಿ ಹಾಡಿದ್ದಾರೆ.ಭಕ್ತಿಗೀತೆಗಳು ಮತ್ತು ಖಾಸಗಿ ಆಲ್ಬಂಗಳು ಸೇರಿದಂತೆ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರು ಪ್ರಪಂಚದಾದ್ಯಂತ ಹಲವಾರು ಏಕವ್ಯಕ್ತಿ ಸಂಗೀತ ಕಚೇರಿಗಳನ್ನ ಸಹ ನೀಡಿದ್ದಾರೆ.

ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು. ಪ್ರಿಯತಮ , ಮುತ್ತೇ ಪ್ರಥಮ, ಮುಂತಾದ ಜನಪ್ರಿಯ ಕನ್ನಡ ಹಾಡುಗಳ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.

ವಾಣಿ ಜಯರಾಮ್ ಮೂರು ಬಾರಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಯಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನುಪಡೆದಿದ್ದಾರೆ. ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಗುಜರಾತ್ ಸೇರಿದಂತೆ ರಾಜ್ಯಗಳಿಂದ ತಮ್ಮ ಗಾಯನಕ್ಕಾಗಿ ರಾಜ್ಯ ಸರ್ಕಾರದ ಪ್ರಶಸ್ತಿಗಳನ್ನು ಪಡೆದಿದ್ದಾರೆ.ಭಾರತ ಸರ್ಕಾರ ಇವರ ಅನನ್ಯ ಸಾಧನೆಯನ್ನ ಗುರುತಿಸಿ ದೇಶದ ಮೂರನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡಿತ್ತು. ಆದ್ರೆ, ಆ ಪ್ರಶಸ್ತಿ ಸ್ವೀಕರಿಸುವ ಮುನ್ನವೇ ವಾಣಿ ಜಯರಾಂ ನಿಧನರಾಗಿರುವುದು ತೀವ್ರ ದುಃಖಕ್ಕೆ ಕಾರಣವಾಗಿದೆ.

Related posts

ಅಪಘಾತ: ಜೀವನ್ಮರಣ ಹೋರಾಟದ ಬಳಿಕ ಆಸ್ಪತ್ರೆಯಲ್ಲಿ ಕೊಕ್ಕಡದ ಯುವಕ ನಿಧನ

ಮ್ಯಾಗಿ ಸೇವಿಸಿದ ಮಹಿಳೆ ಸಾವು

ಥಾಮಸ್ ಕಪ್ ಭಾರತದ ಸಾಧನೆ ಅಣಕವಾಡಿದ ಐಎಎಸ್ ಅಧಿಕಾರಿ..!