ನ್ಯೂಸ್ ನಾಟೌಟ್ : ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಇಂದು ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲ ತಿಂಗಳ ಹಿಂದೆ ಅವರ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿತ್ತು, ಪಾಕ್ ರಾವಲ್ ಪಿಂಡಿಯಿಂದ ದುಬೈಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿತ್ತು. ಈಗ ಅವರು ಚೇತರಿಸಿಕೊಳ್ಳುವುದು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದರು.
ಆರೋಗ್ಯದ ಕುರಿತಾದ ಬೆಳವಣಿಗೆಯನ್ನು ಟ್ವಿಟ್ಟರ್ ನಲ್ಲಿ ಅವರ ಕುಟುಂಬ ಹಂಚಿಕೊಂಡಿತ್ತು, “‘ಮುಷರಫ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಈಗ ಅವರು ವೆಂಟಿಲೇಟರ್ನಲ್ಲಿದ್ದಾರೆ. ಅನಾರೋಗ್ಯದ (ಅಮಿಲಾಯ್ಡೋಸಿಸ್) ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ” ಎಂದು ಟ್ವೀಟ್ ನಲ್ಲಿ ಮಾಹಿತಿ ನೀಡಲಾಗಿತ್ತು.
ಅವರ ಅಂಗಗಳು ಕೂಡ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ ಈ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ನಿಧನರಾಗಿದ್ದಾರೆ. ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಪಾಕ್ ಸೇನಾ ಜನರಲ್ ಆಗಿ ಅವರು ಕಾರ್ಯನಿರ್ವಹಿಸಿದ್ದು, ಕಾರ್ಗಿಲ್ ಗಡಿಯಲ್ಲಿ ಪಾಕ್ ಸೇನೆಗೆ ಭಾರತದ ವಿರುದ್ಧ ಕುಮ್ಮಕ್ಕು ನೀಡಿದ್ದ ಆರೋಪ ಅವರ ಮೇಲಿತ್ತು. ಅದಕ್ಕೆ ತಕ್ಕ ಪ್ರತ್ಯುತ್ತರ ಭಾರತೀಯ ಸೇನೆ ನೀಡಿತ್ತು.